ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಸಮರ್ಪಕ ಸಾರಿಗೆ ಸೌಲಭ್ಯ ಕುರಿತಂತೆ ನ.4 ಸೋಮವಾರದಂದು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಸಾರ್ವಜನಿಕರು ಕಕರಸಾ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಯೊಂದಿಗೆ ನೇರವಾಗಿ ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 4 ರಿಂದ ಸಂಜೆ 5ವರೆಗೆ ೋನ್ ಇನ್ ನಡೆಯಲಿದೆ. ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ, ಬಸ್ಪಾಸ್ ಹೊಂದಿದ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುವುದಿಲ್ಲವೇ, ನಿಮ್ಮ ಊರಿನಲ್ಲಿ ಬಸ್ ನಿಲುಗಡೆ ಮಾಡುತ್ತಿಲ್ಲವೆ ಹಾಗೂ ಬಸ್ ನಿಲ್ದಾಣ ನಿರ್ವಹಣೆ ಸಮರ್ಪಕವಾಗಿದೆಯೆ ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಲಿದ್ದಾರೆ. ಮೊ.: 7760992402 - 6366423884ಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.