ಜಿಲ್ಲೆ

ವಿದ್ಯುತ್​ ಗ್ರಾಹಕರ ಸಂವಾದ ಸಭೆ

Kopala - Raveendra V K

ಕೊಪ್ಪಳ: ಮುನಿರಾಬಾದ್​ ಜೆಸ್ಕಾಂ ಕಚೇರಿ ವ್ಯಾಪ್ತಿಯ ವಿದ್ಯುತ್​ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್​ ಗ್ರಾಹಕರ ಸಂವಾದ ಸಭೆ ಏ.19ರಂದು ಬೆಳಗ್ಗೆ 11 ಗಂಟೆಗೆ ಮುನಿರಾಬಾದ್​ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಗ್ರಾಮೀಣ ಭಾಗದ ವಿದ್ಯುತ್​ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿರಂತರ ಸಭೆ ಹಮ್ಮಿಕೊಳ್ಳಲಾಗುತ್ತಿದೆ. ಮುನಿರಾಬಾದ್​, ಹುಲಿಗಿ, ಹಿಟ್ನಾಳ, ಅಗಳಕೇರಾ, ಶಿವಪುರ, ಗಿಣಿಗೇರಾ, ಹಿರೇಬಗನಾಳ, ಕುಣಿಕೇರಾ, ಕಲ್​ತಾವರಗೇರಾ, ಬಂಡಿಹರ್ಲಾಪುರ, ಬೂದುಗುಂಪಾ, ಗುಳದಳ್ಳಿ, ಬೇವಿನಹಳ್ಳಿ, ಇಂದರಗಿ, ಹೊಸಳ್ಳಿ ಗ್ರಾಪಂ ಪಿಡಿಒಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಎಇಇ ತಿಳಿಸಿದ್ದಾರೆ.