ಜಿಲ್ಲೆ

ಮಹಿಳಾ ಸಬಲೀಕರಣಕ್ಕೆ ಸಂಜೀವಿನಿ ಸಹಕಾರಿ

Kopala - Raveendra V K

ಕೊಪ್ಪಳ: ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ವೇದಿಕೆ ಕಲ್ಪಿಸುವ ಜತೆಗೆ ಆದಾಯ ವೃದ್ಧಿಗೆ ದೀಪ ಸಂಜೀವಿನಿ ಸ್ಟಾಲ್​ ಸಹಕಾರಿ ಎಂದು ತಾಪಂ ಲೆಕ್ಕಾಧಿಕಾರಿ ರವಿಕುಮಾರ ಅಯೋಧ್ಯೆ ಹೇಳಿದರು.

ನಗರದ ತಾಪಂ ಕಚೇರಿ ಆವರಣದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಮಂಗಳವಾರ ಆರಂಭಿಸಿದ ದೀಪ ಸಂಜೀವಿನಿ ಸ್ಟಾಲ್​ ಉದ್ಘಾಟಿಸಿ ಮಾತನಾಡಿದರು.

ಸಂಜೀವಿನಿ ಯೋಜನೆಯಡಿ ಮಹಿಳೆಯರ ಸಂ ರಚಿಸಿದ್ದು, ಹಲವು ಚಟುವಟಿಕೆ ಹಮ್ಮಿಕೊಳ್ಳಲಾಗುತ್ತಿದೆ. ಮಹಿಳೆಯರ ಸ್ವಾವಲಂಬನೆಗೆ ಅನುಕೂಲ ಮಾಡಲಾಗಿದೆ. ಅವರು ತಯಾರಿಸಿದ ಉತ್ಪನ್ನಗಳಿಗೆ ವೇದಿಕೆ ಕಲ್ಪಿಸಿದ್ದು ಆದಾಯ ವೃದ್ಧಿ ಮೂಲಕ ಮಹಿಳಾ ಸಬಲೀಕರಣವಾಗುತ್ತಿದೆ ಎಂದರು.

ತಾಪಂ ಸಹಾಯಕ ನಿರ್ದೇಶಕ ಮಹೇಶ ಎಚ್​. ಮಾತನಾಡಿ, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಮಹಿಳೆಯರು ತಮ್ಮ ಕೈ ಚಳಕ, ಪರಿಶ್ರಮ ಹಾಗೂ ಸೃಜನಶೀಲತೆಯಿಂದ ವಿವಿಧ ಆಕರ್ಷಕ ದೀಪಗಳನ್ನು ತಯಾರಿಸಿದ್ದಾರೆ. ಅವರಿಗೆ ಮಾರುಕಟ್ಟೆ ಒದಗಿಸುವುದು, ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸುವ ಮೂಲಕ ಅವರ ಸ್ವಾವಲಂಬಿ ನಡೆಗಳನ್ನು ಪ್ರೆರೇಪಿಸಲಾಗುತ್ತಿದೆ ಎಂದು ತಿಳಿಸಿದರು.

ತಾಪಂ ವ್ಯವಸ್ಥಾಪಕ ಬಸವರಾಜ್​ ಪಾಟೀಲ್​, ತಾಲೂಕ ಯೋಜನಾಧಿಕಾರಿ ರಾಜೆಸಾಬ್​ ನದಾಫ್​, ಪ್ರಥಮ ದರ್ಜೆ ಸಹಾಯಕ ಕಿರಣ ಕುಮಾರ್​ಮ ವಿಷಯ ನಿರ್ವಾಹಕಿ ಲಲಿತಾ, ಎನ್​ಆರ್​ಎಲ್​ಎಂ ಯೋಜನೆ ಜಿಲ್ಲಾ ವ್ಯವಸ್ಥಾಪಕ ಜಾಕೀರ ಹುಸೇನ್​, ವೆಂಕೋಬ್​ ಡಿ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್​ ಇತರರಿದ್ದರು.