ಜಿಲ್ಲೆ

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

10 ದಿನಗಳ ಕುರಿ-ಮೇಕೆ ಸಾಕಾಣಿಕೆ ತರಬೇತಿ, 30 ದಿನಗಳ ಮೊಬೈಲ್​ ರಿಪೇರಿ ಮತ್ತು ಸರ್ವಿಸ್​ ತರಬೇತಿ ಹಾಗೂ ಮಹಿಳಾ ಹೊಲೆಗೆ ತರಬೇತಿಗಾಗಿ ಫೆ.22 ರಂದು ಸಂದರ್ಶನ ನಡೆಯಲಿದ್ದು, ಫೆ. 24 ರಿಂದ ತರಬೇತಿಗಳು ಪ್ರಾರಂಭವಾಗಲಿವೆ. ಮಾಹಿತಿಗೆ ನಿರ್ದೇಶಕರು, ಸ್ಟೇಟ ಬ್ಯಾಂಕ್​ ಆಫ್​ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್​ ಹತ್ತಿರ, ಕೊಪ್ಪಳ ದೂ.ಸಂ: 08539-231038 ಮೊ.ಸಂ: 9483618178, 7259073827, 9538096796 & 9481085217 ಗೆ ಸಂಪರ್ಕಿಸಬಹುದೆಂದು ನಿರ್ದೇಶಕರು ತಿಳಿಸಿದ್ದಾರೆ.