ಜಿಲ್ಲೆ

ವಸತಿ ಶಾಲೆಗಳ ಅತಿಥಿ ಶಿಕ್ಷಕರ ನೇಮಕ ಅರ್ಜಿ ಆಹ್ವಾನ

ಕೊಪ್ಪಳ: 2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ-, ಇಂಗ್ಲೀಷ್​, ಗಣಿತ, ವಿಜ್ಞಾನ ವಿಷಯದಲ್ಲಿ ತಲಾ 1, ಗಣಕ ವಿಜ್ಞಾನದಲ್ಲಿ 2 ಹುದ್ದೆಗಳು ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಹಾಗೂ ಗಣಕ ವಿಜ್ಞಾನ ವಿಷಯದಲ್ಲಿ ತಲಾ 1 ಹುದ್ದೆ ನೇಮಿಸಿಕೊಳ್ಳಲಾಗುವುದು. ಅರ್ಹ ವಿದ್ಯಾರ್ಹತೆ ಉಳ್ಳವರು ಅರ್ಜಿ ಸಲ್ಲಿಸಬಹುದು. ಎಲ್ಲ ಹುದ್ದೆಗೆ ಟಿಇಟಿ ಕಡ್ಡಾಯ. ಮೆರಿಟ್​ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಹರು ಜೂ.12 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಖಾಲಿ ಹುದ್ದೆ ಇರುವ ಶಾಲೆ, ಕಾಲೇಜು ಸೇರಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿ ಮೊ.ಸಂ.7026884063 ಗೆ ಸಂಪರ್ಕಿಸಬಹುದು ಎಂದು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.