ಕೊಪ್ಪಳ: ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗವುಂತೆ ಸರ್ಕಾರ ಕ್ರಮವಹಿಸಬೇಕೆಂದು ಎಸ್ಯುಸಿಐ ಜಿಲ್ಲಾ ಸಂಚಾಲಕ ಶರಣು ಗಡ್ಡಿ ಹೇಳಿದರು.
ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು.
ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಿಎಚ್ಸಿ ಹಾಗೂ ಪಿಎಚ್ಸಿಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುವಂತಾಗಬೇಕು. ವೈದ್ಯರು ಹಾಗೂ ಇತರ ಸಿಬ್ಬಂದಿ ನೇಮಕವಾಗಬೇಕು. ಔಷಧಕ್ಕೆ ಹೊರ ಕಳಿಸಬಾರದು. ಸ್ವಚ್ಛತೆ ಕಾಪಾಡಬೇಕು. ಎಲ್ಲ ವಿಧದ ಪರೀೆ ಆಸ್ಪತ್ರೆಯಲ್ಲೇ ಮಾಡಬೇಕು. ಜನರಿಗೆ ಕುಡಿವ ನೀರು, ಶೌಚಗೃಹ ಹಾಗೂ ಇತರ ಮೂಲ ಸೌಕರ್ಯ ಕಲ್ಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು. ಈ ಬಗ್ಗೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಹೆಚ್ಚಿನ ಜನರು ಸಹಿ ಮಾಡುವ ಮೂಲಕ ಬೆಂಬಲಿಸಿ ಎಂದು ಮನವಿ ಮಾಡಿದರು. ಪಕ್ಷದ ಸದಸ್ಯ ಶರಣು ಪಾಟೀಲ್ ಇದ್ದರು.