ಜಿಲ್ಲೆ

ಅನಧಿಕೃತ ಕೋಚಿಂಗ್​ ಸೆಂಟರ್​ ವಿರುದ್ಧ ಕ್ರಮಕ್ಕೆ ಸೂಚನೆ

Kopala - Raveendra V K

ಕೊಪ್ಪಳ: ಜಿಲ್ಲೆಯಲ್ಲಿನ ಅನಧಿಕೃತ ಕೋಚಿಂಗ್​ ಸೆಂಟರ್​ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೂಚಿಸಿದ್ದಾರೆ.

ವಿವಿಧೆಡೆ ನವೋದಯ, ಮುರಾರ್ಜಿ ದೇಸಾಯಿ, ಆದರ್ಶ, ಕಿತ್ತೂರು ರಾಣಿ ಚೆನ್ನಮ್ಮ, ಸೈನಿಕ, ವಸತಿ ಶಾಲೆಗಳ ಪ್ರವೇಶಕ್ಕೆ ತರಬೇತಿ ನೀಡುವುದಾಗಿ ಕೋಚಿಂಗ್​ ಸೆಂಟರ್​ ಹುಟ್ಟಿಕೊಂಡಿವೆ. ಮಕ್ಕಳನ್ನು ಸೆಳೆದು, ಹೆಚ್ಚಿನ ಶುಲ್ಕ ಪಡೆಯಲಾಗುತ್ತಿದೆ. ಯಾವುದೇ ನೋಂದಣಿ ಇಲ್ಲದೇ ಅನಧಿಕೃತವಾಗಿ ನಡೆಸಲಾಗುತ್ತಿದೆ. ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುತ್ತಿಲ್ಲ. ಮಕ್ಕಳ ದಾಖಲಾತಿ ಸರ್ಕಾರಿ, ಇಲ್ಲವೇ ಖಾಸಗಿ ಶಾಲೆಗಳಲ್ಲಿರುತ್ತದೆ. ಈ ಬಗ್ಗೆ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲವೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಬಂದಿವೆ. ಅಲ್ಲದೇ ಇತ್ತೀಚೆಗೆ ನಡೆದ ಆಯೋಗ ಸದಸ್ಯರ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ 15 ದಿನದೊಳಗೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಡಿಡಿಪಿಐಗೆ ತಿಳಿಸಿದ್ದಾರೆ.

ಗಂಗಾವತಿ ನಗರದಲ್ಲಿ ಹೆಣ್ಣು ಮಕ್ಕಳು ಭಿಾಟನೆಯಲ್ಲಿ ತೊಡಗಿದ್ದಾರೆ. ಗ್ಯಾರೇಜ್​, ಅಂಗಡಗಿಗಳು ಹಾಗೂ ಇತರ ಉದ್ದಿಮೆಗಳಲ್ಲಿ ಮಕ್ಕಳ ಬಳಕೆ ಆಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಮಾಜ ಕಲ್ಯಾಣ ಹಾಗೂ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದ್ದಾರೆ.