ಜಿಲ್ಲೆ

ಕೊಪ್ಪಳದಲ್ಲಿ ವಾಕ್​-ಇನ್​-ಇಂಟರ್​ವ್ಯೂವ್​ 7ರಂದು

Kopala - Raveendra V K

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್​-ಇನ್​-ಇಂಟರ್​ವ್ಯೂವ್​ ಡಿ.7ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂದರಗಿ ದೊಡ್ಲ ಡೈರಿ ಕಂಪನಿ ಭಾಗಿಯಾಗಲಿದೆ. ಕಂಪನಿಯಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿಕೊಳ್ಳಲಿದೆ. ಬಿ.ಬಿ.ಎ., ಬಿ.ಕಾಂ., ಬಿ.ಎಸ್ಸಿ., ಐ.ಟಿ.ಐ., ಡಿಪ್ಲೋಮಾ, ಎಂ.ಎಸ್ಸಿ, ಎಂ.ಕಾಂ ವಿದ್ಯಾರ್ಹತೆಯ ಹಾಗೂ ಕಡ್ಡಾಯವಾಗಿ 2 ರಿಂದ 4 ವರ್ಷ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹರು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ: 6361143422ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.