ಜಿಲ್ಲೆ

ಜಿಲ್ಲಾ ಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿನ ಕುಸುಮನಗರದಲ್ಲಿನ ಸಿ.ವಿ. ರಾಮನ್ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಜ. 19ರಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯೆ ಅನುರಾಧಾ ಆರಾಧ್ಯಮಠ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾವಿದ್ಯಾಲಯವು ಪ್ರತಿವರ್ಷ ಸಿ.ವಿ. ರಾಮನ್ ಪ್ರಶಸ್ತಿ ನೀಡುತ್ತ ಬಂದಿದೆ. ಎಸ್‌ಎಸ್‌ಎಲ್‌ಸಿ ಪಠ್ಯ ಆಧಾರಿತ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಮೊದಲ 3 ಸ್ಥಾನ ಪಡೆದ ಮೂವರಿಗೆ ನಗದು ಶಿಷ್ಯವೇತನ ನೀಡಲಾಗುವುದು. ಅಲ್ಲದೆ ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು. ಅಂದು ಬೆಳಗ್ಗೆ 10.30ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ಮಾರುತಿ ಕದಂ, ಸುಧಾ ಕಬ್ಬೂರ ಸುದ್ದಿಗೋಷ್ಠಿಯಲ್ಲಿದ್ದರು.