ಜಿಲ್ಲೆ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನ

Gadag - Desk - Tippanna Avadoot

ಲಕ್ಷ್ಮೇಶ್ವರ: ಪಟ್ಟಣದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಮುಖ್ಯೋಪಾಧ್ಯಾಯಿನಿ ಇಂದುಮತಿ ಬಿ. ಜಕ್ಕನಗೌಡ್ರ ಮತ್ತು ಸುವರ್ಣಗಿರಿ ತಾಂಡಾದ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನಿತಾ ಎಸ್. ಬೆನ್ನಾಳ ಅವರು ಗದಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಇಂದುಮತಿ ಜಕ್ಕನಗೌಡರ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಅನಿತಾ ಬೆನ್ನಾಳ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.