ಜಿಲ್ಲೆ

ಜಿಲ್ಲಾಮಟ್ಟದ ಮಕ್ಕಳ ಸಮ್ಮೇಳನ ನಾಳೆ

ರಾಘವೇಂದ್ರಗೌಡ ಭೀ ಪಾಟೀಲ್

ಬೈಲಹೊಂಗಲ: ಭಾರತ ಸೇವಾದಳ ಜಿಲ್ಲಾ ಸಮಿತಿ, ತಾಲೂಕು ಸಮಿತಿ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಸೇವಾದಳದ ಶತಮಾನೋತ್ಸವ ಅಂಗವಾಗಿ ಜಿಲ್ಲಾಮಟ್ಟದ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳ ಡಿ.28 ರಂದು ಪಟ್ಟಣದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಮಹಾಂತೇಶ ತುರಮರಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗ್ಗೆ 9 ಗಂಟೆಗೆ ರಾಣಿ ಚನ್ನಮ್ಮ ಸಮಾಧಿಯಿಂದ ಶುರುವಾಗುವ ಮಕ್ಕಳ ಪಥಸಂಚಲನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಂಎಸ್‌ಎಸ್‌ಆರ್ ಪ್ರೌಢಶಾಲೆ ತಲುಪುವುದು. 11 ಗಂಟೆಗೆ ಮಕ್ಕಳ ಮೇಳವನ್ನು ಶಾಸಕರಾದ ಮಹಾಂತೇಶ ಕೌಜಲಗಿ ಮತ್ತು ಬಾಬಾಸಾಹೇಬ ಪಾಟೀಲ ಉದ್ಘಾಟಿಸಲಿದ್ದಾರೆ.

ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ತಹಸೀಲ್ದಾರ್ ಸಚ್ಚಿದಾನಂದ ಕುಚನೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ, ತಾಪಂ ಇಒ ಸುಭಾಸ ಸಂಪಗಾಂವಿ, ಪಿಐ ಪಂಚಾಕ್ಷರಿ ಸಾಲಿಮಠ, ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ, ಜಿಲ್ಲಾ ಕಾರ್ಯದರ್ಶಿ
ವಿಠ್ಠಲ ಹೆಗಡೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಭುನೀಲಕಂಠ ಸ್ವಾಮೀಜಿ, ಡಾ.ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು. ಅನಿಲ ಪತ್ತಾರ, ವಿ.ಬಿ.ಕಂಬಾರ, ಎಸ್.ಬಿ.ಮಲಗೌಡರ, ವಿ.ಸಿ.ಅಡಕಿ ಇದ್ದರು.