ವಿಜಯವಾಣಿ ಸುದ್ದಿಜಾಲ ಧಾರವಾಡ
ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025ರ ನಿಮಿತ್ತ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ (ಲ್ಯಾಂಡ ರೇಸೆಸ್ ಪ್ರೊಡಕ್ಟ್)ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ, ಜಿಲ್ಲೆಯ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದೆ. ಸ್ಪರ್ಧೆಯನ್ನು ಡಿ. 5ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಆಸಕ್ತರು ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಮಾಹಿತಿಯೊಂದಿಗೆ ತಯಾರಿಸಿದ ಖಾದ್ಯದೊಂದಿಗೆ ಹಾಜರಿರಬೇಕು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.