ಜಿಲ್ಲೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಇಂದು

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಸರ್ಕಾರಿ ನೌಕರರ ಭವನದ ಸಾಂಸ್ಕೃತಿಕ ಸಭಾಭವನದಲ್ಲಿ ಏ. 7ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ವೈಶುದೀಪ ಪ್ರತಿಷ್ಠಾನದ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ಎಐಪಿಟಿಎಫ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್​.ಎಸ್​. ಕೆಳದಿಮಠ, ಡಾ. ಶಶಿ ಪಾಟೀಲ, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕ ಮೋಹನ ಶಿವಣ್ಣವರ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಂಟಿ ನಿರ್ದೇಶಕ ಡಾ. ಬಸವಪ್ರಭು ಹಿರೇಮಠ, ಕುಮಾರ ಬೆಕ್ಕೇರಿ ಆಗಮಿಸಲಿದ್ದಾರೆ. ಜಿಲ್ಲಾಧ್ಯಕ್ಷ ಎಸ್​.ಎಫ್. ಸಿದ್ದನಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ. ಪಿ.ಬಿ.ಕುರಬೆಟ್ಟ ಹಾಗೂ ಚಂದ್ರಶೇಖರ ತಿಗಡಿ ಸ್ಪರ್ಧೆಗಳ ಸಂಯೋಜಕರಾಗಿ ಪಾಲ್ಗೊಳ್ಳುವರು.