ಜಿಲ್ಲೆ

ಕಬಡ್ಡಿ ಗ್ರಾಮೀಣ ಸೊಗಡಿನ ಕ್ರೀಡೆ : ಭುವನೇಶ್ ಜಿ ಅಭಿಮತ ಪುತ್ತೂರು ತಾಲೂಕು ಪ್ರಥಮ

ಸುಬ್ರಹ್ಮಣ್ಯ: ಕಬಡ್ಡಿ ನಮ್ಮ ಮಣ್ಣಿನ ಕ್ರೀಡೆ. ಗ್ರಾಮೀಣ ಕ್ರೀಡೆಯಾದ ಇದು ಈಗ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದೆ. ಗ್ರಾಮೀಣ ಜನರು ಬಹಳ ಹಿಂದಿನಿಂದಲೂ ಈ ಕ್ರೀಡೆ ಮೆಚ್ಚಿಕೊಂಡು ಸಾಂಸ್ಕೃತಿಕ ಕ್ರೀಡೆಯನ್ನಾಗಿ ಅಪ್ಪಿಕೊಂಡಿದ್ದಾರೆ. ಹಳ್ಳಿಯಿಂದ ಆರಂಭವಾದ ಈ ಕ್ರೀಡೆ ಇಂದು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿದೆ ಎಂದು ದ.ಕ.ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್ ಜಿ.ಹೇಳಿದರು.

ಗುತ್ತಿಗಾರಿನ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಗುತ್ತಿಗಾರು ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಗೌಡ ಕಾಂತಿಲ, ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಚೆನ್ನಮ್ಮ ಕೆ., ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಸಾವಿತ್ರಿ ಕೆ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಉಮಾವತಿ ಎನ್., ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಶ್ರೀಧರ, ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘ ಅಧ್ಯಕ್ಷ ಸೂಪಿ ಪೆರಾಜೆ, ಇಸಿಓ ಸಂಧ್ಯಾ, ಪ್ರಾಥಮಿಕ ದೈಹಿಕ ಶಿಕ್ಷಣ ಸಂಘ ಅಧ್ಯಕ್ಷ ಧನಂಜಯ ಎನ್., ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ದಯಾನಂದ ಮುತ್ಲಾಜೆ, ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಮಾಧವ ಬಿ.ಕೆ., ಎಸ್‌ಡಿಎಂಸಿ ಉಪಾಧ್ಯಕ್ಷ ಪ್ರಸನ್ನ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ತಾಲೂಕು ಸರ್ಕಾರಿ ನೌಕರರ ಸಂಘ ಕಾರ್ಯದರ್ಶಿ ಧನಲಕ್ಷ್ಮಿ, ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿ ಉಪಾಧ್ಯಕ್ಷ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು.

ಫಲಿತಾಂಶ: ಬಾಲಕರ ವಿಭಾಗದಲ್ಲಿ 14 ತಂಡ ಹಾಗೂ ಬಾಲಕಿಯರು ವಿಭಾಗದಲ್ಲಿ 14 ತಂಡ ಭಾಗವಹಿಸಿದ್ದವು. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕು ಪ್ರಥಮ ಹಾಗೂ ಬಂಟ್ವಾಳ ತಾಲೂಕು ದ್ವಿತೀಯ ಸ್ಥಾನ ಪಡೆಯಿತು ಬಾಲಕಿಯರ ವಿಭಾಗದಲ್ಲಿ ಪುತ್ತೂರು ತಾಲೂಕು ಪ್ರಥಮ ಹಾಗೂ ಬಂಟ್ವಾಳ ತಾಲೂಕು ದ್ವಿತೀಯ ಸ್ಥಾನ ಪಡೆಯಿತು.