KTV karaoke singing microphone close up 
ಜಿಲ್ಲೆ

ಸೆ.20ರಂದು ಜಿಲ್ಲಾಮಟ್ಟದ ಗಾಯನ ಸ್ಪರ್ಧೆ: ನಾಡೋಜ ಜಿ.ನಾರಾಯಣ ಜನ್ಮಶತಮಾನೋತ್ಸವದ ಅಂಗವಾಗಿ ಆಯೋಜನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಕರ್ನಾಟಕ ಜಾನಪದ ಪರಿಷತ್ ಮಾಜಿ ಅಧ್ಯಕ್ಷ ನಾಡೋಜ ಜಿ.ನಾರಾಯಣ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಮದ್ದೂರು ತಾಲೂಕು ದೇಶಹಳ್ಳಿ ಗ್ರಾಮದಲ್ಲಿ ಸೆ.20ರಂದು ಜಿಲ್ಲಾಮಟ್ಟದ ಜನಪದ ಗೀತೆ ಹಾಗೂ ಗುಂಪುಗಾಯನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಪರಿಷತ್‌ನ ಮಂಡ್ಯ ತಾಲೂಕು ಘಟಕದ ಅಧ್ಯಕ್ಷ ಕಾರಸವಾಡಿ ಮಹದೇವ ತಿಳಿಸಿದ್ದಾರೆ.

ಸ್ಪರ್ಧೆಯು ಅಂದು ಬೆಳಗ್ಗೆ 9ಕ್ಕೆ ಆರಂಭಗೊಳ್ಳಲಿದೆ. ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಜನಪದ ಗೀತೆಗಳನ್ನು ಪರಿಚಯಿಸುವುದರ ಜತೆಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಸಂಘಟಿಸಲಾಗಿದೆ. ಜಿಲ್ಲೆಯ ಯುವಜನರಿಗೆ ಖಾಸಗಿ ಹಾಗೂ ಪ್ರೌಢಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನ, ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವವರು ಅಂದು ಬೆಳಗ್ಗೆ 9 ಗಂಟೆಯೊಳಗೆ ದೇಶಹಳ್ಳಿಯಲ್ಲಿನ ನಾಡೋಜ ಜಿ.ನಾರಾಯಣ ಭವನದಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಮಾಹಿತಿಗೆ ಮೊ.ಸಂ 9980360066 ಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.