ಉಡುಪಿ: ಜಿಲ್ಲೆಯಲ್ಲಿ 750ಕ್ಕೂ ಮಿಕ್ಕಿ ಸಹಕಾರಿ ಸಂಗಳು ಯೂನಿಯನ್ನಲ್ಲಿ ನೋಂದಣಿಯಾಗಿದ್ದು, 21 ಸಹಕಾರಿ ಸಂಗಳನ್ನು ಮಹಿಳೆಯರೇ ನಡೆಸುತ್ತಿದ್ದಾರೆ. 4,500 ಕೋಟಿ ರೂ. ಠೇವಣಿ ಹೊಂದಿರುವುದು ಜನರ ವಿಶ್ವಾಸಾರ್ಹತೆಗೆ ಸಾಯಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗೆ ಆಡಳಿತ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜಕೀಯ ರಹಿತವಾದ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ. 40ರಷ್ಟು ಜನರು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದಲ್ಲಿ 45,500 ಸಹಕಾರಿ ಸಂಗಳಿವೆ. ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಪ್ರತಿ ಸಂಗಳ ಆಡಳಿತ ಮಂಡಳಿಯಲ್ಲಿ ಇಬ್ಬರು ಮಹಿಳೆಯರು ಇರುವುದು ಕಡ್ಡಾಯವಾಗಿದೆ. ಕೇಂದ್ರದಲ್ಲಿ ಸಹಕಾರಿ ಸಚಿವಾಲಯ ಸ್ಥಾಪನೆ ಬಳಿಕ ಈ ವಲಯ ಶಕ್ತಿಯುತವಾಗಿದೆ. ಮುಂದಿನ ದಿನಗಳಲ್ಲಿ ಗಾಂಧಿನಗರದಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯವೂ ಪ್ರಾರಂಭವಾಗಲಿದ್ದು, ಆಸಕ್ತರು ಹೆಚ್ಚಿನ ಅಧ್ಯಯನಕೈಗೊಳ್ಳಬಹುದಾಗಿದೆ ಎಂದು ಹೇಳಿದರು.
ನಗರಸಭಾ ಉಪಾಧ್ಯೆ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಲಯನ್ಸ್ ಗವರ್ನರ್ ಸಪ್ನಾ ಸುರೇಶ್, ಪ್ರಾಧ್ಯಾಪಕ ಸಂತೋಷ್ ಶೆಟ್ಟಿ, ಸಹಕಾರ ಯೂನಿಯನ್ ನಿರ್ದೇಶಕ ಸುಧೀರ್ ವೈ ಉಪಸ್ಥಿತರಿದ್ದರು. ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.