ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾ ಮಟ್ಟದ ಸಮಾವೇಶ ಮೇ 4ರಂದು ಮುರ್ಡೇಶ್ವರದ ಜನತಾ ವಿದ್ಯಾಲಯದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ನೇತ್ರಾವತಿ ಶ್ಯಾನಭಾಗ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದಲ್ಲಿ ಸಾಧಕ ಮಹಿಳೆಯರಿಗೆ ಸಮ್ಮಾನ, ಮಹಿಳಾ ಸಂತೆ, ಕಾರ್ಯಾಗಾರ, ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸುವರು. ಡಾ. ಲಲಿತಾ ಶೆಟ್ಟಿ ಉಪನ್ಯಾಸ ನೀಡುವರು. ಮಹಿಳಾ ಸಂತೆಯಲ್ಲಿ ಸ್ಟಾಲ್ ಹಾಕುವ ಮಹಿಳಾ ಸಂಘಗಳು ಏ.27ರ ಒಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಸವಿತಾ ಕಾಮತ್ ಮಾತನಾಡಿ, ಮಹಿಳೆಯರು ಒಂದೇ ವೇದಿಕೆಯಡಿ ಸೇರಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಸಂಘದ ಸದಸ್ಯೆ ಜಯಶ್ರೀ ನಾಯ್ಕ, ರಜನಿ ದೇವಾಡಿಗ, ಶೋಭಾ ನಾಯ್ಕ ಇತರರು ಉಪಸ್ಥಿತರಿದ್ದರು.