ಜಿಲ್ಲೆ

ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ

ರವಿ ಎಸ್. ಬಳೂಟಗಿ

ಗದಗ: ಆಯುಷ್ ಇಲಾಖೆ ಸಹಯೋಗದಲ್ಲಿ ಬಸವ ಯೋಗ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗಳಲ್ಲಿ ವಿವಿಧ ಅಭ್ಯರ್ಥಿಗಳು ಭಾಗವಹಿಸಿ ಪ್ರಶಸ್ತಿ ಗೆದ್ದಿದ್ದಾರೆ. ಪ್ರಾಥಮಿಕ ಶಾಲಾ ಮಕ್ಕಳ ವಿಭಾಗದ ಯೋಗಾಸನ ಸ್ಪರ್ಧೆಯ ಬಾಲಕರ ವಿಭಾಗದಲ್ಲಿ ವೆಂಕಟೇಶ ಹಾಲಣ್ಣವರ, ಅನಂತ ಕುರಲಗೇರಿ ಹಾಗೂ ಸುಶ್ರುತ ಗುಡಗೂರ ಮತ್ತು ಬಾಲಕಿಯರ ವಿಭಾಗದಲ್ಲಿ ಗೌರಿ ನೀಲಗುಂದ, ಶ್ವೇತಾ ಹಾಲಣ್ಣವರ, ಅಮೂಲ್ಯಾ ಹವಳೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಶ್ರಾವಣಿ ಗುಡಗೂರ, ನಿವೇದಿತಾ ಹೊಸಮಠ, ಗೋವರ್ಧನ ಬಡಿಗೇರ, ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಯೋಗ ಸ್ಪರ್ಧೆಯಲ್ಲಿ ಶಫಿ ನದಾಫ್, ರೂಪಾ ಮಲಕಶೆಟ್ಟಿ ಪ್ರಶಸ್ತಿ ಪಡೆದಿದ್ದಾರೆ. ಜೂ. 21ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಯೋಗ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.