ಜಿಲ್ಲೆ

ಜ.10 ರಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ: ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಜ.10 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಜಿಲ್ಲೆಯ ಬಾಲ ಹಾಗೂ ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆ 2016ರ ಪರಿಣಾಮಕಾರಿ ಅನುಷ್ಠಾನ ಹಾಗೂ ಪುನರ್ವಸತಿ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===