ಸಿರವಾರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ತಹಸೀಲ್ದಾರ್ ರವಿ ಎಸ್.ಅಂಗಡಿ ಉದ್ಘಾಟಿಸಿದರು. ಪಪಂ ಸದಸ್ಯರಾದ ಎಚ್.ಮಾರ್ಕಪ್ಪ, ಹಾಜಿ ಚೌದ್ರಿ, ಗಡ್ಲ ಚನ್ನಪ್ಪ, ಅಮರಮ್ಮ ವೀರಭದ್ರಪ್ಪ, ಸಿಡಿಪಿಒ ನಾಗರತ್ನ ನಾಯಕ, ಡಾ.ಪರಿಮಳಾ ಮೈತ್ರಿ, ಪಪಂ.ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ ಇನ್ನಿತರರಿದ್ದರು. 
ಜಿಲ್ಲೆ

ಪೌಷ್ಟಿಕ ಆಹಾರ ಸೇವಿಸಿ

ಸಿರವಾರ: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.

ಗರ್ಭಿಣಿಯರಲ್ಲಿ ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆಯ ಕೊರತೆ

ಪಟ್ಟಣದ ಸಿಡಿಪಿಒ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು. ಗ್ರಾಮೀಣ ಪ್ರದೇಶದ ಗರ್ಭಿಣಿಯರಲ್ಲಿ ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆಯ ಕೊರತೆ ಇದೆ. ಇದನ್ನು ತಡೆಯಲು ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದರು.

20 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಉಡಿ ತುಂಬಿ ಆರತಿ ಬೆಳಗಿ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯರಾದ ಸೂರಿ ದುರಗಣ್ಣ ನಾಯಕ, ಅಜಿತ ಕುಮಾರ ಹೊನ್ನಟಗಿ, ಕೃಷ್ಣ ನಾಯಕ, ಹಸೇನ್ ಅಲಿ ಸಾಬ್, ಮೌಲಸಾಬ್ ವರ್ಚಸ್, ಎಚ್.ಮಾರ್ಕಪ್ಪ, ಹಾಜಿ ಚೌದ್ರಿ, ಗಡ್ಲ ಚನ್ನಪ್ಪ, ಅಮರಮ್ಮ ವೀರಭದ್ರಪ್ಪ, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಪ್ರಜಾಪಿತ ಬ್ರಹ್ಮ ಕುಮಾರಿ ವಿಶ್ವವಿದ್ಯಾಲಯದ ಜ್ಯೋತಿ ಅಕ್ಕ, ಸಿಡಿಪಿಒ ನಾಗರತ್ನ ನಾಯಕ, ಡಾ.ಪರಿಮಳಾ ಮೈತ್ರಿ, ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ಕಾರ್ಮಿಕ ಇಲಾಖೆ ಅಧಿಕಾರಿ ಶರಣು, ಅಂಗನವಾಡಿ ಕಾರ್ಯಕರ್ತೆಯರು ಇನ್ನಿತರರಿದ್ದರು.