ಹೊಸಪೇಟೆ: ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ನಿಕಟಪೂರ್ವ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರ ವರ್ಗಾವಣೆ ನಂತರ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇ ಆಗಿದ್ದ ಎಂ.ಎಸ್.ದಿವಾಕರ್ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಅಧಿಕಾರ ವಹಿಸಿಕೊಂಡರು. ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.