ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್ಭೈರಸಂದ್ರ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿದ್ದ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ರಾಜ್ಗೆ ಇಂದು(ಶುಕ್ರವಾರ) ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.
ಗಲಭೆಯಲ್ಲಿ ದಿನ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ್ದ ಆರೋಪದಡಿ ಸಂಪತ್ರಾಜ್ನನ್ನು ನ.15ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಸಂಪತ್ರಾಜ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಯೇ ಇದ್ದರು. ಇದನ್ನೂ ಓದಿರಿ Video| ಬಿಜೆಪಿ ಮುಖಂಡನ ಬರ್ತ್ ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ