ಜಿಲ್ಲೆ

ನಟ ನೆನಪಿರಲಿ ಪ್ರೇಮ್​ ಮನೆಗೆ ಡಿಕೆಶಿ ಭೇಟಿ..!

ಬೆಂಗಳೂರು: ಆರ್​ಆರ್​ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಯ ಕಣ ದಿನೇ ದಿನೆ ರಂಗೇರುತ್ತಿದ್ದು, ಕಾಂಗ್ರೆಸ್​, ಜೆಡಿಎಸ್​ ಮತ್ತು ಆಡಳಿತರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನೆಲೆಯಲ್ಲಿ ಮೂರು ಪಕ್ಷಗಳು ಭಾರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.

ಕಾಂಗ್ರೆಸ್​ನಿಂದ ಬಿಜೆಪಿಗೆ ಹಾರಿ ಆರ್​ಆರ್​ ನಗರ ಕ್ಷೇತ್ರದಿಂದ ಕಾಂಗ್ರೆಸ್ ವಿರುದ್ಧವೇ ಕಣಕ್ಕಿಳಿದಿರುವ ಹಾಗೂ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ ಮುನಿರತ್ನರನ್ನು ಸೋಲಿಸಲೇಬೇಕೆಂಬ ಜಿದ್ದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಬಿದ್ದಿದ್ದಾರೆ. ಹೀಗಾಗಿ ಸಾಕಷ್ಟು ರಣತಂತ್ರಗಳನ್ನು ಎಣೆಯುತ್ತಿದ್ದಾರೆ.

ಇತ್ತ ಚುನಾವಣೆ ಸಮೀಪಿಸುತ್ತಿದ್ದಂತೆ ಡಿಕೆಶಿ, ನಟ ನೆನಪಿರಲಿ ಪ್ರೇಮ್ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆರ್​ಆರ್ ನಗರ ಹಾಗೂ ಶಿರಾ ಎಲೆಕ್ಷನ್ ಪ್ರಚಾರಕ್ಕೆ ಆಹ್ವಾನಿಸಲು ಭೇಟಿ ನೀಡಿದ್ರಾ? ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಇಷ್ಟೇ ಅಲ್ಲದೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರನ್ನು ಸಹ ಡಿಕೆಶಿ ಭೇಟಿ ಮಾಡಿದ್ದಾರೆ. ನಾಗರಬಾವಿ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)