ಕಲಬುರಗಿ: ವರ್ಗಾವಣೆ ದಂಧೆ ಸೇರಿದಂತೆ ಇನ್ಯಾವುದೇ ವಿಚಾರಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೆ ನಾವೇ ತನಿಖೆ ಮಾಡಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್ ಬೇರೆಯವರನ್ನು ಹೆದರಿಸಿದಂತೆ ನನ್ನನ್ನು ಬೆದರಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಸಿಎಂ ಎಚ್ಡಿಕೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಮಾಜಿ ಸಿಎಂ ಎಚ್ಡಿಕೆ ಪೆನ್ಡ್ರೈವ್ ಬಿಡುಗಡೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರ ಬಳಿ ಯಾವುದೇ ದಾಖಲಿಗಳಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ನಾವೆ ತನಿಖೆ ಮಾಡಿಸುತ್ತೇವೆ ಎಂದಿದ್ದಾರೆ.
ಬೇರೆಯವರನ್ನು ಹೆದರಿಸಿದಂತೆ ನನ್ನನ್ನು ಬೆದರಿಸಿದರೆ ಯಾವುದೇ ಪ್ರಯೋಜನವಿಲ್ಲ. ನಾನು ಯಾವುದಕ್ಕೂ ಜಗ್ಗುವುದಿಲ್ಲ. 1975ರಿಂದಲೂ ಈ ರೀತಯ ಅನೇಕ ಬಾಂಬ್ಗಳನ್ನು ನೋಡಿದ್ದೇನೆ ಎಂದು ಮಾಜಿ ಸಿಎಂ ಎಚ್ಡಿಕೆ ಆರೋಪಕ್ಕೆ ಟಾಂಗ್ ಕೊಟ್ಟಿದ್ದಾರೆ.
ಈ ಜನ್ಮದಲ್ಲೂ ಡಿಕೆಶಿ ಅಂತ ತಮ್ಮಾ ಬೇಡ ಎಂಬ ಎಚ್ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಅವರ ನುಡಿಮುತ್ತುಗಳನ್ನು ಬಹಳ ಸಂತೋಷದಿಂದ ಸ್ವೀಕಾರ ಮಾಡಿದ್ದೀನಿ. ನಾಳೆ ಅಥವಾ ನಾಡಿದ್ದು ಅವರ ಹೇಳಿಕೆ ಹಾಗೂ ಪ್ರಶ್ನೆಗಳಿಗೆ ಉತ್ತರ ಕೊಡೋಣ. ನನ್ನದೂ ಹಿಟ್ ಆ್ಯಂಡ್ ರನ್ ಜಾಯಮಾನವಲ್ಲ ಎಂದು ಮಾಜಿ ಸಿಎಂ ಎಚ್ಡಿಕೆ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ಧಾರೆ.