ಕೊಪ್ಪಳ: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ನಾವು ವಿರೋಧ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಭಗವದ್ಗೀತೆ ನಮ್ಮ ದೇಶದ ಅಸ್ಮಿತೆ. ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ ಎಂದರು.
ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನ ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ. ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ. ದೂರ ದರ್ಶನದ ಮೂಲಕ ಭಗವದ್ಗೀತೆಯನ್ನ ಪ್ರಚಾರ ಮಾಡಿದ್ದು ನಮ್ಮ ಪಕ್ಷ ಎಂದು ಸಮರ್ಥಿಸಿಕೊಂಡರು.