ಕೊಂಡಗೂಳಿ ಗ್ರಾಪಂ ಕಾಮಗಾರಿಗಳ ಅನುದಾನ ಬಿಡುಗಡೆಗೊಳಿಸದಂತೆ ಒತ್ತಾಯಿಸಿ ವಿಜಯುಪುರದಲ್ಲಿ ಕೆಆರ್​ಎಸ್​ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಶಿವಾನಂದ ಯಡಹಳ್ಳಿ, ವಿಕ್ರಮ ವಾಮೋರೆ, ಸೀನು ಹಿಪ್ಪರಗಿ ಮತ್ತಿತರರಿದ್ದರು. 
ಜಿಲ್ಲೆ

ಕಾಮಗಾರಿಗಳ ಅನುದಾನ ಬಿಡುಗಡೆಗೊಳಿಸಬೇಡಿ

ಗಿರೀಶ ಸಗರ

ವಿಜಯಪುರ: ಕೊಂಡಗೂಳಿ ಗ್ರಾಮ ಪಂಚಾಯಿತಿ ಕಾಮಗಾರಿಗಳ ಅನುದಾನ ಬಿಡುಗಡೆಗೊಳಿಸದಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ದೇವರ ಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಪಂನಲ್ಲಿ 2020 ರಿಂದ 2024 ಡಿಸೆಂಬರ್​ವರೆಗೆ ನಡೆದಿರುವ ಎಲ್ಲ ಕಾಮಗಾರಿಗಳು ಅಪೂರ್ಣ ಮತ್ತು ಕಳಪೆ ಗುಣಮಟ್ಟದ್ದಾಗಿವೆ. ಆದರೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ದೇವರ ಹಿಪ್ಪರಗಿ, ಕೊಂಡಗೂಳಿ ಪಿಡಿಒ ಮತ್ತು ಪಂಚಾಯಿತಿ ಅಧ್ಯಕ್ಷರು ಸೇರಿ ಕೋಟಿ ರೂ. ಲೆಕ್ಕದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸರ್ಕಾರದ ಮಹತ್ವಪೂರ್ಣ ಯೋಜನೆ ಹಾಗೂ ಕಾಮಗಾರಿಗಳಲ್ಲಿ ಹಣ ಲೂಟಿ ಮಾಡಿದ್ದು, ಈ ಕುರಿತು ಈಗಾಗಲೇ ಲೋಕಾಯುಕ್ತ ಇಲಾಖೆಗೆ ದೂರು ದಾಖಲಿಸಲಾಗಿದೆ. ದೂರು ಪ್ರಗತಿಯುಲ್ಲಿರುವ ಹಿನ್ನೆಲೆಯಲ್ಲಿ ತಮ್ಮ ಇಲಾಖೆಯಿಂದ ಯಾವುದೇ ರೀತಿಯ ಹೊಸ ಕಾಮಗಾರಿ ಆರಂಭಿಸದಂತೆ ಹಾಗೂ ಈ ಹಿಂದೆ ನಡೆಸಿದ ಕಾಮಗಾರಿಗಳ ಅನುದಾನ ಬಿಡುಗಡೆಗೊಳಿಸಬಾರದು. ಕೂಡಲೇ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪದಾಧಿಕಾರಿಗಳು ಆಗ್ರಹಿಸಿದರು.

ಪಕ್ಷದ ರಾಜ್ಯ ಸಂಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ವಿಕ್ರಮ ವಾಮೋರೆ, ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ತಿಪ್ಪಣ್ಣ ಹೆಬ್ಬಾಳ, ಹಮಿದ ಇನಾಮದಾರ ಮತ್ತಿತರರಿದ್ದರು.