ವಿಶ್ವಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ತಾಲೂಕಿನ ಬಾಡಗಂಡಿಯಎಸ್.ಆರ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಶ್ರೀಮತಿ ಶಾಂತಾದೇವಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಿರುನಾಟಕ ಮೂಲಕ ಜನಜಾಗೃತಿ ಮೂಡಿಸಿದರು. 
ಜಿಲ್ಲೆ

ನಿತ್ಯ ಯೋಗ, ಧ್ಯಾನ ಮಾಡಿ

ದತ್ತಾತ್ರೇಯ ಪಿ ಕುಲಕರ್ಣಿ

ಬೀಳಗಿ: ತಾಲೂಕಿನ ಬಾಡಗಂಡಿ ಎಸ್.ಆರ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಶ್ರೀಮತಿ ಶಾಂತಾದೇವಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಿಮಿತ್ತ ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯದ ಪ್ರಾಮುಖ್ಯ ಬಿಂಬಿಸುವ ಕಿರುನಾಟಕ ಪ್ರದರ್ಶಿಸಿ ಜಾಗೃತಿ ಮೂಡಿಸಿದರು.

ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ಎಂ.ಎನ್. ಪಾಟೀಲ ಮಾತನಾಡಿ, ದೈಹಿಕವಾಗಿ ಸದೃಢರಾಗಿದ್ದರೂ ಮನಸ್ಸು ದುರ್ಬಲವಾಗಿದ್ದರೆ ನೂರಾರು ಕಾಯಿಲೆಗಳು ಬರುವ ಸಾಧ್ಯತೆಗಳಿವೆ. ಇದರಿಂದ ಎಲ್ಲರೂ ಜಾಗೃತರಾಗಬೇಕಿದೆ. ಒತ್ತಡದ ಜೀವನ ಸೂಕ್ತವಲ್ಲ, ನಿತ್ಯ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಯೋಗ, ಧ್ಯಾನ ಮಾಡಬೇಕು ಎಂದರು.

ವೈದ್ಯಕೀಯ ಕಾಲೇಜು ಸಂಶೋಧನಾ ಕೇಂದ್ರದ ಡೀನ್ ಡಾ. ಧರ್ಮರಾಯ ಇಂಗಳೆ, ಆಡಳಿತಾಧಿಕಾರಿ ಡಾ. ರಾಘವೇಂದ್ರ ಎಸ್. ಪಾಟೀಲ, ಮುಖ್ಯವೈದ್ಯಾಧಿಕಾರಿಗಳು, ಪ್ರಾಚಾರ್ಯ ಪ್ರಸಾದ ಪಾಟೀಲ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.