ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರವನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಉದ್ಘಾಟಿಸಿದರು. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಅಧಿಕಾರಿಗಳಾದ ಎಂ.ಎಸ್. ಹಿರೇಮಠ, ಕೆ.ಕೆ. ಹುಗ್ಗೆನವರ ಇದ್ದಾರೆ.  
ಜಿಲ್ಲೆ

ಕೇಂದ್ರ ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದ್ದೇನು ಗೊತ್ತಾ?

ವಿಜಯಪುರ: ಪ್ರಯಾಣಿಕರಿಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಉದ್ದೇಶದಿಂದ ಪ್ರಪ್ರಥಮವಾಗಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರವನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಉದ್ಘಾಟಿಸಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಘಾಟನೆ ಸಮಾರಂಭದಲ್ಲಿ ಮಾಹಿತಿ ಕೇಳುವ ಮೂಲಕ ಜಿಲ್ಲಾಧಿಕಾರಿಗಳು ಉದ್ಘಾಟನೆ ನೆರವೇರಿಸಿದರು.

ಈ ಮಾಹಿತಿ ಕೇಂದ್ರದಲ್ಲಿ ವಿಜಯಪುರ ಜಿಲ್ಲೆ ಮತ್ತು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಚರಣೆ ಆಗುವ ಎಲ್ಲ ಬಸ್‌ಗಳ ಮಾಹಿತಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ದೊರೆಯುವ ಎಲ್ಲ ಸವಲತ್ತುಗಳ ಕುರಿತು ಪ್ರಯಾಣಿಕರಿಗೆ ಈ ಕೇಂದ್ರದಿಂದ ಮಾಹಿತಿ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಮಾಹಿತಿ ಕೇಂದ್ರದಲ್ಲಿ ಎರಡು ಪಾಳೆಯದಲ್ಲಿ ಇಬ್ಬರು ಮಹಿಳಾ ಸಂಚಾರ ನಿಯಂತ್ರಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವ ಕುರಿತು ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಬುಕ್ ಮಾಡುವ ವಿಧಾನ ಕುರಿತು ಕೇಂದ್ರದಲ್ಲಿ ಮಾಹಿತಿ ದೊರೆಯಲಿದೆ ಎಂದರು.

ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಾರಿಗೆ ಅಧಿಕಾರಿಗಳಾದ ಎಂ.ಎಸ್. ಹಿರೇಮಠ, ಬಸ್ ನಿಲ್ದಾಣದ ವ್ಯವಸ್ಥಾಪಕ ಕೆ.ಕೆ. ಹುಗ್ಗೆನವರ ಇದ್ದರು.