ಕಲಾದಗಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾದ್ಯಾಪಕಿ ಸರೋಜಿನಿ ನೀ. ಹೊಸಕೇರಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಕನ್ನಡ ವಿಶ್ವವಿದ್ಯಾಲಯ ಹಂಪಿಯ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಸಿ.ಮಹದೇವ ಅವರ ಮಾರ್ಗದರ್ಶನದಲ್ಲಿ ಕಪ್ಪತ್ತಗುಡ್ಡ ಪರಿಸರದ ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯ ಕುರಿತು ಮಂಡಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ದೊರಕಿದೆ.