ಜಿಲ್ಲೆ

ಆಸ್ಪತ್ರೆ ಹಾಸಿಗೆ ಮೇಲೆ ಮಲಗಿದ ನಾಯಿ: ಹಳೆಯ ಫೋಟೋ ಎಂದ ಆಡಳಿತ ಮಂಡಳಿ..!

reportermys

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಹೆರಿಗೆ ವಾರ್ಡ್ ಅವ್ಯವಸ್ಥೆಗೆ ಸಂಬಂಧಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೆರಿಗೆ ವಾರ್ಡ್‌ನಲ್ಲಿ ವೈದ್ಯಕೀಯ ತ್ಯಾಜ್ಯ, ಬಟ್ಟೆ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆದಿರುವುದು. ಹಾಸಿಗೆ ಹಾಗೂ ನೆಲದ ಮೇಲೆ ಹಾಕಿರುವ ಹಾಸಿಗೆ ಮೇಲೆ ನಾಯಿಗಳು ಹಾಗೂ ಕಸದ ಡಬ್ಬಿಯಲ್ಲಿ ಆಹಾರವನ್ನು ಹುಡುಕುವ ನಾಯಿಗಳು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಿಮ್ಸ್ ಮೆಡಿಕಲ್ ಸೂಪರಿಡೆಂಟ್ ಡಾ.ಹರೀಶ್, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೋ ಹಳೆಯದು. ಈ ಬಗ್ಗೆ ಹಲವರು ಮಾಹಿತಿ ಪಡೆದುಕೊಂಡಿದ್ದಾರೆ. ಫೋಟೋದಲ್ಲಿರುವಂತೆ ವಾರ್ಡ್‌ನಲ್ಲಿ ಅವ್ಯವಸ್ಥೆ ಇಲ್ಲ ಎಂದಿದ್ದಾರೆ