ವಿಜಯಪುರ: ಜಿಲ್ಲಾಡಳಿತ, ಜಿ.ಪಂ., ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆ.23 ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ಪೋಲಿಸ್ ಪರೇಡ್ ಮೈದಾನದಲ್ಲಿ ಶ್ವಾನ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ಎಲ್ಲ ಶ್ವಾನಗಳ ಮಾಲೀಕರು ತಮ್ಮ ವಿವಿಧ ತಳಿ ಶ್ವಾನಗಳ ಹೆಸರನ್ನು ನಗರದಲ್ಲಿನ ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಪಶು ಆಸ್ಪತ್ರೆಯಲ್ಲಿ ಹೆಸರು ನೋಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಿ.ಎಸ್. ಕನಮಡಿ ಮೊ.6361307916, ಡಾ. ಸುಜಾತ ಎಸ್.ಎಂ., ಮೊ. 9845873701, ತಿಡಗುಂದಿ ಪಶು ಚಿಕಿತ್ಸಾಲಯದ ಹಿರಿಯ ಪಶುವೈದ್ಯಾಧಿಕಾರಿ ಡಾ. ರಮೇಶ ರಾಠೋಡ ಮೊ. 9480358435 ಹಾಗೂ ಡಾ. ಸತೀಶ ಪಾಟೀಲ ಮೊ. 7349442318ಗೆ ಸಂಪರ್ಕಿಸಬಹುದಾಗಿದೆ.
ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿದ ಉತ್ತಮ ಶ್ವಾನಗಳಿಗೆ ಬಹುಮಾನ ನೀಡಲಾಗುವುದೆಂದು ಉಪನಿರ್ದೇಶಕರು ಹಾಗೂ ಮುಖ್ಯ ಪಶುವೈದ್ಯಾಧಿಕಾರಿಗಳು ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.