ರಾಯಚೂರು: ನಗರದ ವಿವಿಧ ಹೋಟೆಲ್‌ಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಕಾರಿಗಳು ಶನಿವಾರ ದಾಳಿ ನಡೆಸಿ ಅನಕೃತವಾಗಿ ಬಳಕೆ ಮಾಡುತ್ತಿದ್ದ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್‌ಗಳನ್ನು ವಶಕ್ಕೆ ಪಡೆದುಕೊಂಡರು.
ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿದ ಅಕಾರಿಗಳು ದಾಳಿ ನಡೆಸಿದಾಗ ಹೋಟೆಲ್‌ಗಳಲ್ಲಿ ಅನಕೃತವಾಗಿ ಬಳಕೆ ಮಾಡುತ್ತಿದ್ದು 12 ಸಿಲೆಂಡರ್‌ಗಳನ್ನು ವಶಕ್ಕೆ ಪಡೆದುಕೊಂಡು ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ.
ದಾಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಹಾರ ಶಿರಸ್ತೇದಾರ್ ಬಿ.ಆರ್.ವೆಂಕಣ್ಣ, ಆಹಾರ ನಿರೀಕ್ಷಕ ಮುನಿಭೂಪತಿ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.