ಹೊಸಮನೆಯ ಶಶಿಧರ್ ಶರ್ಮಾ 
ಜಿಲ್ಲೆ

ಕೌಟುಂಬಿಕ ದೌರ್ಜನ್ಯ ಪ್ರಕರಣ, ವ್ಯಕ್ತಿಗೆ 1.6 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗದ 2ನೇ ಜೆಎಂಎಫ್‌ಸಿ ನ್ಯಾಯಾಲಯವು 1.6 ವರ್ಷ ಸಾಧಾ ಜೈಲು ಶಿಕ್ಷೆ, 15 ಸಾವಿರ ರೂ. ದಂಡ ವಿಧಿಸಿದೆ. ದಂಡ ವಿಧಿಸಲು ವಿಫಲರಾದರೆ 7 ತಿಂಗಳು ಹೆಚ್ಚುವರಿ ಸಾಧಾ ಜೈಲು ಶಿಕ್ಷೆ ವಿಧಿಸಿದೆ.

ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ನಿವಾಸಿ, ಹಾಲಿ ಹೊಸಮನೆಯ ಶಶಿಧರ್ ಶರ್ಮಾ (43) ಶಿಕ್ಷೆಗೆ ಒಳಗಾದವರು. ಈತನ ವಿರುದ್ಧ 2017ರಲ್ಲಿ ಮಹಿಳಾ ಠಾಣೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಮಹಿಳಾ ಠಾಣೆ ಪಿಎಸ್‌ಐ ಪ್ರಭಾವತಿ ಸೇತುಸನದಿ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಶಾರದಾ ಕೊಪ್ಪದ ಅವರು ಆರೋಪ ಸಾಬೀತಾಗಿದ್ದರಿಂದ ಜೈಲು ಶಿಕ್ಷೆ ಮತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕಿರಣ್‌ಕುಮಾರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.