ಜಿಲ್ಲೆ

ದೈವಸ್ಥಾನ ಅಡಿಪಾಯ ಕಾಂಕ್ರಿಟೀಕರಣಕ್ಕೆ ಶ್ರಮದಾನ

ಸುಬ್ರಹ್ಮಣ್ಯ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮೂಲಸ್ಥಾನ ಗರಡಿ ಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವಸ್ಥಾನ ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದು, ಭಾನುವಾರ ಪಂಬೆತ್ತಾಡಿ ಚಿಗುರು ಗೆಳೆಯರ ಬಳಗದ ಸದಸ್ಯರು ಮತ್ತು ಭಕ್ತರು ಶ್ರಮದಾನ ಮೂಲಕ ದೈವಸ್ಥಾನದ ಅಡಿಪಾಯಕ್ಕೆ ಕಾಂಕ್ರಿಟೀಕರಣ ಕಾಮಗಾರಿ ನೆರವೇರಿಸಿದರು.

ಪಂಜ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಮೇಶ್ವರ ಬಿಳಿಮಲೆ, ಉಪಾಧ್ಯಕ್ಷ ಉಮೇಶ್ ಬುಡೆಂಗಿ, ಪೈಂದೋಡಿ ಸುಬ್ರಾಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಪಂಬೆತ್ತಾಡಿ ಚಿಗುರು ಗೆಳೆಯರ ಬಳಗದ ಅಧ್ಯಕ್ಷ ಅಶ್ವಥ್ ಬಾಬ್ಲುಬೆಟ್ಟು, ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ, ಪವಿತ್ರಾ ಮಲ್ಲೆಟ್ಟಿ, ಮಾಲಿನಿ ಕುದ್ವ, ಪಂಜ ಶಾರದಾಂಬಾ ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಪ್ರಮುಖರಾದ ರಾಜೇಶ್ ಕುದ್ವ, ರಜಿತ್ ಭಟ್, ದಿನೇಶ್ ಗರಡಿ ಸೇರಿದಂತೆ ಪಂಬೆತ್ತಾಡಿ ಚಿಗುರು ಗೆಳೆಯರ ಬಳಗದ ಸದಸ್ಯರು ಶ್ರಮದಾನ ಮಾಡಿದರು.