ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿಯವರು ಸ್ಥಾಪಿಸಿದ ಸ್ವಸ್ತಿಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜಿಗೆ ಗುರುವಾರ ಪುಸ್ತಕ ಇಡುವ ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.
ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ದೇವರ ಪೂಜೆ, ಗುರು ಹಿರಿಯರ ಆಶೀರ್ವಾದ ಪಡೆದು, ದಾನ&ಧರ್ಮದೊಂದಿಗೆ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವುದು ಭಾರತೀಯ ಸಂಸತಿ ಎಂದರು.
ಇನ್ನರ್ ವೀಲ್ ಕ್ಲಬ್ನ ಬಿಂದಿಯಾ ಶರತ್ ಕುಮಾರ್ ಶೆಟ್ಟಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಆಟೋಟ ಉಪಕರಣಗಳನ್ನು ಹಾಗೂ ಪುಸ್ತಕ ಇಡುವ ಕಪಾಟನ್ನು ಕೊಡುಗೆಯಾಗಿ ನೀಡಿದರು. ಪ್ರಾಂಶುಪಾಲೆ ಸೌಮ್ಯಶ್ರೀ ಸ್ವಾಗತಿಸಿದರು. ಉಪನ್ಯಾಸಕಿ ಪವನಶ್ರೀ ವಂದಿಸಿದರು.