ತಾಳಿಕೋಟೆ: ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಡೋಣಿ ಉಕ್ಕಿ ಹರಿಯುತ್ತಿದ್ದು, ಪಟ್ಟಣದಿಂದ ಹಡಗಿನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆಳಮಟ್ಟದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ಡೋಣಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಮೇಲ್ಮಟ್ಟದ ಸೇತುವೆಯಲ್ಲಿ 6 ತಿಂಗಳ ಹಿಂದೆ ಕುಸಿತ ಕಂಡಿದ್ದರಿಂದ ಅದರ ಮೇಲಿನ ಸಂಚಾರ ಸ್ಥಗಿತಗೊಳಿಸಿ ಕೆಳಮಟ್ಟದ ಸೇತುವೆ ಮೇಲೆ ಅವಕಾಶ ಮಾಡಿಕೊಡಲಾಗಿತ್ತು. ಈಗ ಕೆಳಮಟ್ಟದ ಸೇತುವೆ ಜಲಾವೃತಗೊಂಡು ಸಂಚಾರಕ್ಕೆ ತೊಂದರೆ ಉಂಟಾಗಿದೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಎರಡು ಗಂಟೆಗೂ ಅಧಿಕ ಮಳೆ ಸುರಿದಿದೆ.