ಹುಬ್ಬಳ್ಳಿ: ಕೋಮು ಗಲಭೆ ಸೃಷ್ಟಿಸಲು ಹವಣಿಸುತ್ತಿರುವ ದುಷ್ಟಶಕ್ತಿಗಳಿಗೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು. ದೇವರನ್ನು ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಯಾಕೆ ಎಂದು ಭಾರತೀಯ ಮೂಲ ನಿವಾಸಿಗಳ ಒಕ್ಕೂಟದ ಧಾರವಾಡ ಜಿಲ್ಲಾ ಸಂಚಾಲಕ ಶಂಕರ ಅಜಮನಿ ಪ್ರಶ್ನಿಸಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹೆಸರಲ್ಲಿ ಮತೀಯವಾದಿಗಳು, ಸನಾತನವಾದಿಗಳು ಗಲಭೆ ಸೃಷ್ಟಿಸಲು ಯತ್ನಿಸುತ್ತಿವೆ. ಸಿದ್ದರಾಮಯ್ಯನವರ ಸರ್ಕಾರ ಇದಕ್ಕೆ ಅವಕಾಶ ನೀಡಬಾರದು. ಇಂಥ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದೆಂದು ಜನತೆ ಬಿಜೆಪಿಯನ್ನು ಮೂಲೆ ಗುಂಪು ಮಾಡಿರುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸದಾನಂದ ತೇರದಾಳ, ಮಾರುತಿ ಹುಟಗಿ, ಇತರರು ಇದ್ದರು.