ಹಿರೇಕೆರೂರ: ಮಕ್ಕಳು ದೈಹಿಕವಾಗಿ ಆಟಗಳಲ್ಲಿ ತೊಡಗಿಸಿಕೊಳ್ಳದೆ, ಮೊಬೈಲ್ಫೋನ್ ಹೆಚ್ಚಾಗಿ ಬಳಸುವುದರಿಂದ ರೋಗಪೀಡಿತರಾಗುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಡಾ.ಶ್ರೀನಿಧಿ ಎಸ್., ಹೇಳಿದರು.
ಅನಿಕೇತನ ಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಪಟ್ಟಣದ ಗುರುಭವನದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಲಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹರೀಶ ಸುತ್ತಕೋಟಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಸಂಸ್ಥೆಗಳು, ಪಾಲಕರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಶಿಕ್ಷಕರಾದ ಎಸ್.ಆರ್. ಜಾಲಿಕೋನಿ, ಅರುಣಕುಮಾರ, ತಾರಾ, ಸ್ಪೂರ್ತಿ, ಶಿಲ್ಪಾ ಅರ್ಕಾಚಾರಿ ಹಾಗೂ ಸಂಸ್ಥೆ ಸಿಬ್ಬಂದಿ ಮತ್ತು ಶಿಬಿರಾರ್ಥಿಗಳು ಇದ್ದರು. ಇಂಪನಾ ಹಾಗೂ ತನ್ವಿತಾ ಎಸ್.ಪಿ. ಕಾರ್ಯಕ್ರಮ ನಿರ್ವಹಿಸಿದರು.