ಜಿಲ್ಲೆ

ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಎದೆಗುಂದದಿರಿ

ರುದ್ರಪ್ಪ ವಾಲಿ

ಹಗರಿಬೊಮ್ಮಹಳ್ಳಿ: ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ಗಳ ಹಾವಳಿಯಿಂದ ಸಾರ್ವಜನಿಕರು ನಲುಗಿ ಹೋಗಿದ್ದಾರೆ. ಎಷ್ಟೋ ಜನ ಭಯದಿಂದ ಮನೆ ತೊರೆದು ಹೋಗುತ್ತಿರುವ ಪ್ರಕರಣಗಳು ಬಯಲಿಗೆ ಬರುತ್ತಿವೆ. ಸಾರ್ವಜನಿಕರು ಇವುಗಳ ಹಾವಳಿಗೆ ಎದೆಗುಂದಬಾರದು ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಪತ್ರಿಕೆಯೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಮೈಕ್ರೋಫೈನಾನ್ಸ್‌ಗಳ ಹಾವಳಿ ಹೆಚ್ಚಾಗುತ್ತಿದೆ. ಸಾಲ ನೀಡಲಿ ಆದರೆ, ವಸೂಲಾತಿಯಲ್ಲಿ ರಿಯಾಯಿತಿ ಇರಬೇಕು. ಕರುಣೆ ಇಲ್ಲದೆ ವಸೂಲಿ ಮಾಡಲು ಹೋದರೆ ಕುಟುಂಬಗಳು ಮನೆಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರ ಮೈಕ್ರೋಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.