ಬೆಂಗಳೂರು: ಪಶ್ಚಿಮ ಘಟ್ಟ ಹಾಗೂ ಮಲೆನಾಡು ಪ್ರದೇಶಕ್ಕೆ ಮಾರಕವಾಗಿರುವ ಡಾ.ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ವಿಧಾನಸಭೆಯ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಸಮಿತಿ ಸರ್ಕಾರಕ್ಕೆ ಮೊರೆಯಿಟ್ಟಿದೆ.
ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ನೇತೃತ್ವದ ತಂಡವು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ ದವೆ ಅವರನ್ನು ಭೇಟಿಯಾಗಿ ವಸ್ತುಸ್ಥಿತಿ ಮಾಹಿತಿ ಪಡೆಯಿತು.
ನಂತರ ಎಂ.ಪಿ.ಕುಮಾರಸ್ವಾಮಿ 'ವಿಜಯವಾಣಿ'ಯೊಂದಿಗೆ ಮಾತನಾಡಿ, ವರದಿ ಮರು ಪರಿಶೀಲನೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದು, ಮತ್ತೊಮ್ಮೆ ಕೇಂದ್ರದ ಮನವೊಲಿಸಲು ಕೋರಿ ಸಿಎಂ ಬಿಎಸ್ ವೈ ಗೆ ಮನವಿ ಸಲ್ಲಿಸಲಾಗುವುದು ಎಂದರು.