ಜಿಲ್ಲೆ

ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿ

ಮಡಿಕೇರಿ: ಸರ್ಕಾರ ದೇವಸ್ಥಾನ, ಮಸೀದಿ, ಚರ್ಚ್ ತೆರೆಯಲು ಅವಕಾಶ ನೀಡಿದ್ದು, ಸರ್ಕಾರದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ನಗರದ ಜಿ.ಪಂ.ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಮುಖಂಡರೊಂದಿಗೆ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ಮತ್ತು ತೀರ್ಥಕ್ಕೆ ಅವಕಾಶವಿಲ್ಲ. ಅಂತರ ಕಾಯ್ದುಕೊಂಡು ಪ್ರಾರ್ಥಿಸಬೇಕು. ಮಾಸ್ಕ್ ಹಾಕುವುದು, ಥರ್ಮಲ್ ಸ್ಕ್ಯಾನರ್ ಮತ್ತು ಸ್ಯಾನಿಟೈಸರ್ ಬಳಸುವುದು ಎಂದು ತಿಳಿಸಿದರು.

ಮುಸ್ಲಿಂ ಸಮಾಜದ ಮಹಮ್ಮದ್ ಅನೀಫ್ ಮಾತನಾಡಿ, ಪ್ರಾರ್ಥನಾ ಸಂದರ್ಭದಲ್ಲಿ ಒಬ್ಬೊರಿಗೊಬ್ಬರು ಹತ್ತಿರವಾಗುವುದರಿಂದ ಸದ್ಯಕ್ಕೆ ಮಸೀದಿಗಳಲ್ಲಿ ಪ್ರಾರ್ಥನೆ ಸಂಬಂಧ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸರ್ಕಾರದ ನಿರ್ದೇಶನವನ್ನು ಚಾಚೂ ತಪ್ಪದೇ ಪಾಲಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಭಾಗಮಂಡಲದ ಸಂಗಮದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರಮುಖರು ಮನವಿ ಮಾಡಿದರು.