ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಆಶೀರ್ವದಿಸಿದರು. ದೇವರಾಜ್ ಶೆಟ್ಟಿ, ನಿರಂಜನ್, ಡಿ.ಎಸ್.ಸುರೇಶ್ ಇತರರಿದ್ದರು.  
ಜಿಲ್ಲೆ

ಮತದಾರರಿಗೆ ಆಮಿಷವೊಡ್ಡದಿರಿ: ಸಾಣೇಹಳ್ಳಿ ಶ್ರೀ

Shivamogga - Desk - Vinayakumar D B

ಸಾಣೇಹಳ್ಳಿ(ಚಿತ್ರದುರ್ಗ): ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಣೇಹಳ್ಳಿಯ ತರಳಬಾಳು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಯಾವುದೇ ಅಭ್ಯರ್ಥಿಗಳು ಮತದಾರರಿಗೆ ಆಸೆ, ಆಮಿಷ ಒಡ್ಡದೇ ಚುನಾವಣೆ ನಡೆಸಬೇಕು. ಚುನಾಯಿತ ಪ್ರತಿನಿಧಿಗಳು ಕ್ಷೇತ್ರದ ಅಭಿವೃದ್ಧಿಯ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಲಹೆ ನೀಡಿದರು.
ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಉಪಾಧ್ಯಕ್ಷ ನಿರಂಜನ್, ಮಾಜಿ ಶಾಸಕ ಡಿ.ಎಸ್.ಸುರೇಶ್, ಕೆ.ಆರ್.ಆನಂದಪ್ಪ, ಶಂಕರಲಿಂಗಪ್ಪ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಲ್ಮುರಡಪ್ಪ, ಎ.ಸಿ.ಚಂದ್ರಪ್ಪ, ಹಿಂದುಳಿದ ವರ್ಗದ ಮೋರ್ಚಾ ರಾಜ್ಯ ಕಾರ್ಯದರ್ಶಿ ರಾಜಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಸೋಮಶೇಖರ್, ಚಿಕ್ಕಮಗಳೂರು ಜಿಲ್ಲೆ ರೈತ ಮೋರ್ಚಾದ ಮಂಡಲ ಅಧ್ಯಕ್ಷ ಉಮೇಶ್ ಇತರರಿದ್ದರು.