ಸಿದ್ದಾಪುರ: ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬುಧವಾರ ಮಾಹಿತಿ ನೀಡಲಾಯಿತು.
ಪಶುಸಂಗೋಪನಾ ಇಲಾಖೆ ವೈದ್ಯಾಧಿಕಾರಿ ಡಾ. ಶ್ರೇಯಸ್ ಬಿ. ರಾಜ್ ಹಾಗೂ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಮಂಜುನಾಥ ಶಾಸ್ತ್ರಿ ಅವರು ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ, ಬೆಂಬಲ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಅನಗತ್ಯವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವುದು ಬೇಡ. ಉತ್ತಮ ಅಂಕ ಪಡೆಯಲು ನಿರಂತರ ಪರಿಶ್ರಮ ಅಗತ್ಯವಿದೆ. ಜೀವನದಲ್ಲಿ ಗುರಿ ಇಟ್ಟು ನಡೆಯಬೇಕು. ಓದು, ಬರವಣಿಗೆಯ ಮೂಲಕ ನೆನಪಿನಲ್ಲಿಟ್ಟುಕೊಳ್ಳಲು ಸಹಾಯಕವಾಗಿದೆ. ಮೊದಲ ಘಟ್ಟದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಿರಿ ಎಂದು ಮಾರ್ಗದರ್ಶನ ನೀಡಿ ಆತ್ಮವಿಶ್ವಾಸ ತುಂಬಿದರು.
ಶಾಲಾ ಮುಖ್ಯಾಧ್ಯಾಪಕ ರಾಜೇಂದ್ರ ಕಾಂಬಳೆ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.