ಕನ್ನಡ ಭಾಷೆಯ ಕುರಿತು ಅಸಂಬದ್ಧ ಹೇಳಿಕೆ ನೀಡಿದ ನಟ ಕಮಲ್ ಹಾಸನ ಅಭಿಯನದ ಥಗ್ ಲೈಫ್ ಚಿತ್ರವನ್ನು ರಾಜ್ಯದ ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಸವರಾಜ ತಾಳಿಕೋಟಿ, ಮಹಾಂತೇಶ ಹಿರೇಮಠ, ಆನಂದ ಹಡಗಲಿ ಮತ್ತಿತರರಿದ್ದರು. 
ಜಿಲ್ಲೆ

ಥಗ್ ಲೈಫ್ ಚಿತ್ರ ಬಿಡುಗಡೆಗೊಳಿಸದಿರಿ

Vijayapura - Desk - Gurappa Lokuri

ವಿಜಯಪುರ: ಕನ್ನಡ ಭಾಷೆ ಕುರಿತು ಅಸಂಬದ್ಧ ಹೇಳಿಕೆ ನೀಡಿದ ನಟ ಕಮಲ್ ಹಾಸನ ಅಭಿಯನದ ತಮಿಳು ಚಲನಚಿತ್ರ ಥಗ್ ಲೈಫ್ ಚಿತ್ರವನ್ನು ರಾಜ್ಯದ ಯಾವುದೇ ಚಿತ್ರ ಮಂದಿರಗಳಲ್ಲಿ ಬಿಡುಗಡೆಗೊಳಿಸದಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬಣದ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, ಇತ್ತೀಚೆಗೆ ಥಗ್ ಲೈಫ್ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಸಮಾರಂಭದಲ್ಲಿ ತಮಿಳು ನಟ ಕಮಲ ಹಾಸನ್ ಕನ್ನಡ ಹುಟ್ಟಿದ್ದು ತಮಿಳುನಿಂದ ಎಂಬ ಅಸಂಬದ್ಧ ಹೇಳಿಕೆ ನೀಡಿ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅಲ್ಲದೆ, ಕನ್ನಡಿಗರ ಹಾಗೂ ತಮಿಳು ಮಧ್ಯ ವಿಷಬಿಜ ಬಿತ್ತುವ ಜತೆಗೆ ಕನ್ನಡಿಗರಿಗೆ ಅವಮಾನಿಸಿದ್ದಾರೆ. ಇಂತಹ ಹೇಳಿಕೆ ನೀಡಿದ ನಟ ಕಮಲ್ ಹಾಸನ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದೆಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಹಿರೇಮಠ, ಆನಂದ ಹಡಗಲಿ, ರವಿ ಗೊಳಸಂಗಿ, ಸತೀಶ, ವಿನೂತ್, ಭೀಮು, ವಿರೇಶ ಮತ್ತಿತರರಿದ್ದರು.