ನೆಲ್ಯಹುದಿಕೇರಿಯಲ್ಲಿ ಸಿದ್ದಾಪುರ ಠಾಣೆ ಪಿಎಸ್‌ಐ ಮಂಜುನಾಥ್ ಮತ್ತು ಸಿಬ್ಬಂದಿ ಮನೆಬಾಗಿಲಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿದರು.  
ಜಿಲ್ಲೆ

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ

ಶಿವಶಂಕರ್ ಎಂ. ಹೆಬ್ಬಳ್ಳ

ಸಿದ್ದಾಪುರ : ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಮಂಗಳವಾರ ನೆಲ್ಯಹುದಿಕೇರಿಯಲ್ಲಿ ಚಾಲನೆ ನೀಡಲಾಯಿತು.ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಸದಸ್ಯರು ತೆರಳಿ ಜಾಗೃತಿ ಮೂಡಿಸಿದರು. ನಂತರ ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೋ ಕಾಯ್ದೆ, ಮನೆಗಳ್ಳತನ, ಸರಗಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಲ್ಲಿರುವವರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಿದ್ದಾಪುರ ಠಾಣೆಯ ಸಿಬ್ಬಂದಿ ,ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ, ಸದಸ್ಯರು, ಗ್ರಾಮಸ್ಥರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.