ಹೆಬ್ಬಾಳು ಗ್ರಾಮದಲ್ಲಿ ಆಯೋಜಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ ಗ್ರಾಮಸ್ಥರೊಂದಿಗೆ ಪೊಲೀಸ್ ಇನ್‌ಸ್ಪೆೆಕ್ಟರ್ ರೇವಣ್ಣ ಪಾಲ್ಗೊಂಡಿದ್ದರು. 
ಜಿಲ್ಲೆ

ಹೆಬ್ಬಾಳು ಗ್ರಾಮದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಬೇಲೂರು: ಜನಸ್ನೇಹಿ ಆಡಳಿತ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ ಭಾನುವಾರ ಚಾಲನೆ ನೀಡಿದರು.

ರಾಜ್ಯ ಸರ್ಕಾರ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಉತ್ತಮ ಬೆಳವಣಿಗೆ. ಇದರಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಮನೆ ಮನೆಗೆ ತೆರಳಿ ತಿಳಿದು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೊಲೀಸರು ಮುಂದಾಗಲಿ ದ್ದಾರೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಇನ್‌ಸ್ಪೆಕ್ಟರ್ ರೇವಣ್ಣ ಹೇಳಿದರು.

ಪ್ರತಿ ಗ್ರಾಮದಲ್ಲಿ 40 ಮನೆಗಳಿಗೆ ಸೀಮಿತವಾದಂತೆ ಗ್ರಾಮದ ಮುಖಂಡರು ಸಮಿತಿ ರಚಿಸಿ ಸಣ್ಣಪುಟ್ಟ ವಾಜ್ಯಗಳನ್ನು ಅಲ್ಲಿಯೇ ಪರಿಹರಿಸಬಹುದಾಗಿದೆ. ಒಂಟಿ ಮನೆಯಲ್ಲಿ ಕಳ್ಳತನ, ಇತರ ಅಪಘಾತ, ಅವಘಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಯಾರ ಮೇಲಾದರೂ ಅನುಮಾನ ಬಂದಲ್ಲಿ ಅಂತಹ ವ್ಯಕ್ತಿಗಳ ಬಗ್ಗೆ ಪೊಲೀಸ್ ಠಾಣೆಗೆ ತಿಳಿಸುವ ಮೂಲಕ ಪೊಲೀಸ್ ವ್ಯವಸ್ಥೆಯನ್ನು ಬಲ ಪಡಿಸಬೇಕು. ಅಲ್ಲದೆ ಸಿಬ್ಬಂದಿ ಶ್ರದ್ಧೆಯಿಂದ ಕೆಲಸ ನಿರ್ವಹಿಸಬೇಕಿದೆ ಎಂದರು.

ಪಿಎಸ್‌ಐ ಶಿವನಗೌಡ.ಜಿ.ಪಾಟೀಲ್ ಮಾತನಾಡಿ, ಇತ್ತೀಚಿನ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೆ, ಡೌನ್‌ಲೋಡ್, ಫೋನ್ ಪೇ.. ಹೀಗೆ ನಾನಾ ಸೈಬರ್ ಪ್ರಕರಣಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕಿದೆ. ಮೊಬೈಲ್‌ಗಳಲ್ಲಿ ವೈಯಕ್ತಿಕ ಮತ್ತು ಕುಟುಂಬದ ಮಹಿಳೆಯರ ಫೋಟೋ ಹಂಚಿಕೆ ಮಾಡಬಾರದು. ಕೆಲ ಅಹಿತಕರ ಘಟನೆಗಳಿಗೆ ಇದು ಪೂರಕವಾಗಲಿದೆ. ಆದ್ದರಿಂದ ಎಲ್ಲರೂ ಎಚ್ಚರ ವಹಿಸಬೇಕು ಎಂದರು.

ಶರಣ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿ, ರಾಜ್ಯ ಸರ್ಕಾರದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ದೇಶದಲ್ಲೆ ಪ್ರಥಮ ಎನ್ನಲಾಗಿದೆ. ಜನರ ಸಮಸ್ಯೆಗಳನ್ನು ಅವರ ಮನೆಗೆ ತೆರಳಿ ಮಾಹಿತಿ ಕಲೆ ಹಾಕುವುದರಿಂದ ಪೊಲೀಸರು ಜನಸ್ನೇಹಿಯಾಗಿ ಕೆಲಸ ನಿರ್ವಹಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರ ಹೆಚ್ಚಿನ ಸಹಕಾರ ಮುಖ್ಯ ಎಂದರು.

ಹೆಬ್ಬಾಳು ಗ್ರಾಪಂ ಸದಸ್ಯರಾದ ಗಿರೀಶ್, ಗೋಪಾಲ್, ಮುಖಂಡರಾದ ಮೋಹನ್, ಶಿವಮೂರ್ತಿ, ಶೇಖರಪ್ಪ, ದೇವರಾಜ್ ಸೇರಿದಂತೆ ಇತರರಿದ್ದರು.