ಉಪ್ಪುಂದ ಗ್ರಾಪಂ ವ್ಯಾಪ್ತಿಯಲ್ಲಿ ಶಂಕಿತ ಕಾಲರಾ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬುಧವಾರ ತಹಸೀಲ್ದಾರ್ ಪ್ರದೀಪ್ ಆರ್. ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಜಿಲ್ಲೆ

ಅಧಿಕಾರಿಗಳಿಂದ ಮನೆ ಮನೆ ಭೇಟಿ

ಇಂದಿರಾ ಎನ್ ಕೆ

ಬೈಂದೂರು: ಉಪ್ಪುಂದ ಗ್ರಾಪಂ ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಕಳೆದೊಂದು ವಾರದಿಂದ ಶಂಕಿತ ಕಾಲರಾ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬುಧವಾರ ತಹಸೀಲ್ದಾರ್ ಪ್ರದೀಪ್ ಆರ್. ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಮನೆ ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಪ್ಪುಂದ ಗ್ರಾಪಂನಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ನೀರಿನ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳುಹಿಸಿ, ಅದರ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾಧಿಕಾರಿಗಳು ಜನರಿಗೆ ಭರವಸೆ ನೀಡಿದರು.

ತಾಪಂ ಕಾರ್ಯನಿರ್ವಹಣಾಕಾರಿ ಭಾರತಿ ಎನ್., ತಾಲೂಕು ವೈದ್ಯಾಕಾರಿ ಡಾ.ರಾಜೇಶ್, ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ. ಎನ್., ಉಪ್ಪುಂದ ಪಿಡಿಒ ಸುದರ್ಶನ ಎಸ್., ಕಾರ್ಯದರ್ಶಿ ಗಿರಿಜಾ, ಕರಾವಳಿ ಕಾವಲುಪಡೆಯ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಇದ್ದರು.