ಜಿಲ್ಲೆ

ಅಂಬೇಡ್ಕರ್ ಜಯಂತ್ಯುತ್ಸವ

ಮರಿದೇವ ಹೂಗಾರ

ಹುಬ್ಬಳ್ಳಿ: ನಗರದ ಗೋಕುಲ್ ರಸ್ತೆಯ ಪ್ರಿಯದರ್ಶಿನಿ ಕಾಲನಿಯಲ್ಲಿರುವ ಡಾ. ಆರ್. ಬಿ. ಪಾಟೀಲ್ ಮಹೇಶ ವಿಜ್ಞಾನ ಪದವಿಪೂರ್ವ ಕಾಲೇಜ್‌ನಲ್ಲಿ ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಲವಡಿಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಪ್ರಾಚಾರ್ಯ ಹನುಮಂತಪ್ಪ ಮಾತನಾಡಿ, ಡಾ. ಅಂಬೇಡ್ಕರ್ ಅವರದು ಮೇರು ವ್ಯಕ್ತಿತ್ವ. ಸಮಾಜದ ಎಲ್ಲ ತರಹದ ಶೋಷಿತ ವರ್ಗದ ಪರವಾಗಿ ಧ್ವನಿ ಎತ್ತಿದ್ದರು. ಅವರ ಅಭಿವೃದ್ಧಿಗಾಗಿ ಹಗಲಿರಳು ಶ್ರಮಿಸಿದರು. ಇವರ ಶ್ರಮದ ಲಾಭವನ್ನು ನಾವು ಪಡೆಯುತ್ತಿದ್ದೇವೆ ಎಂದರು.

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿದ ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ಮಾತನಾಡಿ, ದೇಶಕ್ಕೆ ಶ್ರೇಷ್ಠ ಲಿಖಿತ ಸಂವಿಧಾನ ನೀಡಿ ದೇಶದ ಅಸಮಾನತೆ ಹೋಗಲಾಡಿಸಲು ಡಾ. ಅಂಬೇಡ್ಕರ್ ಶ್ರಮಿಸಿದ್ದಾರೆ. ಅವರ ವಿಚಾರಧಾರೆಗಳು ದೇಶವನ್ನು ಒಗ್ಗೂಡಿಸಿ, ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ಆಗಿತ್ತು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಐ.ಎಸ್. ಹಿರೇಮಠ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಪನ್ಯಾಸಕ ದ್ಯಾಮಣ್ಣ ಚೌಡಾಳ ಮಾತನಾಡಿದರು. ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.