ಡಾ.ಬಿ.ಆರ್​. ಅಂಬೇಡ್ಕರ್​ 
ಜಿಲ್ಲೆ

16ರಂದು ಡಾ.ಅಂಬೇಡ್ಕರ್ ಜಯಂತಿ

ಮಂಜುನಾಥ ತಿಮ್ಮಯ್ಯ

ಮೈಸೂರು: ರಮಾಬಾಯಿ ಅಂಬೇಡ್ಕರ್ ಮಹಿಳಾ ಸಮಾಜದ 5ನೇ ವಾರ್ಷಿಕೋತ್ಸವ, ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಜೂ.16ರಂದು ಮಧ್ಯಾಹ್ನ 2ಕ್ಕೆ ಜೆ.ಪಿ.ನಗರದ ಪುಟ್ಟರಾಜ ಗವಾಯಿಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಗಾಂಧಿನಗರದ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮೇಯರ್ ಬಿ.ಎಲ್.ಭೈರಪ್ಪ ಕಾರ್ಯಕ್ರಮ ಉದ್ಘಾಟಿಸುವರು.

ಕಾಂಗ್ರೆಸ್ ಮುಖಂಡ ಎಚ್.ವಿ.ರಾಜೀವ್, ಸಮಾಜ ಸೇವಕ ಅಹಿಂದ ಜವರಪ್ಪ, ಪಾಲಿಕೆ ಮಾಜಿ ಸದಸ್ಯೆ ಶಾರದಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಳ್ಳುವರು ಎಂದು ಸಂಘದ ಅಧ್ಯಕ್ಷೆ ಲೀಲಾವತಿ ಯಲಕ್ಕಯ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಶಮಾ, ಎನ್.ವಿ. ರಮೇಶ್ ಇದ್ದರು.