ಸಿಂಧನೂರಿನ ಅಕ್ಕಮಹಾದೇವಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಡಾ.ಅಂಬೇಡ್ಕರ್ ಅವರ ರಾಜಕೀಯ ಸಿದ್ಧಾಂತ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಅಕ್ಕಮಹಾದೇವಿ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಿಸಿದರು. ಸಿಂಡಿಕೇಟ್ ಮಾಜಿ ಸದಸ್ಯ ಆರ್.ಸಿ.ಪಾಟೀಲ್, ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಸಂಜೀವಕುಮಾರ ಗಿರಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರ.ಪಿ.ಕಣ್ಣನ್ ಇದ್ದರು. 
ಜಿಲ್ಲೆ

ಡಾ.ಅಂಬೇಡ್ಕರ್ ಚಿಂತನೆಗಳು ಅನುಷ್ಠಾನಕ್ಕೆ ಬರಲಿ

ನರೇಶ್ ಕುಮಾರ್

ಸಿಂಧನೂರು: ಡಾ.ಅಂಬೇಡ್ಕರ್ ಅವರ ಚಿಂತನೆಗಳು ಭಾರತೀಯ ಸಮಾಜಕ್ಕೆ ಮಾರ್ಗದರ್ಶಕವಾಗಿದ್ದು, ಅನುಷ್ಠಾನಕ್ಕೆ ತರುವ ಕೆಲಸ ನಡೆಯಬೇಕಿದೆ ಎಂದು ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ನಗರದ ಅಕ್ಕಮಹಾದೇವಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಬೆಂಗಳೂರಿನ ಡಾ.ಅಂಬೇಡ್ಕರ್ ತರಬೇತಿ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಡಾ. ಅಂಬೇಡ್ಕರ್ ಅವರ ರಾಜಕೀಯ ಸಿದ್ಧಾಂತ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಕೃಷಿ ಕೂಲಿ ಕಾರ್ಮಿಕರು ಹಾಗೂ ಮಹಿಳಾ ಸಬಲೀಕರಣ ಹಾಗೂ ಕಾರ್ಮಿಕರ ಕುರಿತು ಅಂಬೇಡ್ಕರ್ ಚಿಂತನೆಗಳು ಮಹತ್ವದ್ದಾಗಿವೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ, ಸಂವಿಧಾನದ ಮೂಲಕ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅವಕಾಶಗಳನ್ನು ನೀಡುವುದಾಗಿತ್ತು ಎಂದರು.

ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರೊ.ಪಿ. ಕಣ್ಣನ್ ಮಾತನಾಡಿ, ಡಾ. ಅಂಬೇಡ್ಕರ್ ಅವರ ಚಿಂತನೆಗಳು ಯುವ ಪೀಳಿಗೆಗೆ ದಾರಿ ದೀಪವಾಗಿವೆ ಎಂದರು. ಸಿಂಡಿಕೇಟ್ ಮಾಜಿ ಸದಸ್ಯ ಆರ್.ಸಿ.ಪಾಟೀಲ್ ಮಾತನಾಡಿದರು. ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ, ಪ್ರೊ. ಡಿ. ಎಂ. ಮದರಿ, ಪ್ರೊ. ಚಂದ್ರಕಾಂತ ಎಂ. ಯಾತನೂರ, ಪ್ರೊ. ಎಸ್.ವೈ.ಸುರೇಂದ್ರಕುಮಾರ ಇತರರಿದ್ದರು.